ಸಂತಸದ ಸುದ್ದಿ: ಸದ್ಯದಲ್ಲಿಯೇ ನವಕರ್ನಾಟಕದ ಮೊಬೈಲ್ ಆಪ್ (App) ಬಿಡುಗಡೆಯಾಗಲಿದೆ. ****** ಕರ್ನಾಟಕದ ವಿದ್ಯಾನಗರಿ ಧಾರವಾಡದಲ್ಲಿ ನವಕರ್ನಾಟಕ ಪ್ರಕಾಶನದ ಹೊಸ ಪುಸ್ತಕ ಮಳಿಗೆ ಶೀಘ್ರದಲ್ಲೇ ಆರಂಭವಾಗಲಿದೆ.

Phone icon  CALL US NOW
080 - 22161900

  • ನೆನಪಿನ ಪುಟಗಳು | Nenapina Putagalu (Pre - Order) Released Date  10|12|2023
ನೆನಪಿನ ಪುಟಗಳು | Nenapina Putagalu (Pre - Order) Released Date  10|12|2023
10%

MRP - ₹550.00 ₹495.00

ಅಗಾಧ ಪ್ರತಿಭೆ, ನಿರಂತರ ಹುಡುಕಾಟ. ಅಚಲ ಶ್ರದ್ಧೆ, ಅವಿರತ ದುಡಿಮೆ, ಉಕ್ಕುವ ಚಿಲುಮೆಯಂಥ ಹುಮ್ಮಸ್ಸಿನ ಟಿ.ಎನ್‌. ಸೀತಾರಾಮ್‌‍, ತಾವು ನಡೆದು ಬಂದ ಹಾದಿಯ ನೆನಪುಗಳನ್ನು ಬರೆಯುತ್ತಾ ಹೋಗಿದ್ದಾರೆ. ಅವರೇ ಕರೆದಿರುವಂತೆ ಇವು ನೆನಪಿನ ಪುಟಗಳು. ಆದರೆ, ಆ ನೆನಪುಗಳು ನಮ್ಮನ್ನು ಕೂಡ ಅವರ ಕಾಲಕ್ಕೆ ಕರೆದೊಯ್ಯುತ್ತದೆ. ಟೈಮ್‌ ಮೆಷೀನಿನಲ್ಲಿ ಹಿಂದಕ್ಕೆ ಹೋಗಿ ಕಾಲಾತೀತರಾಗಿ ಅವರು ಕಂಡದ್ದನ್ನು ನಾವೂ ಕಾಣುತ್ತಾ ಹೋಗುತ್ತೇವೆ. ಹೇಳುವುದಕ್ಕಿಂತ ತೋರಿಸುವುದರಲ್ಲಿ ಸೀತಾರಾಮ್‌ ಅವರಿಗೆ ಆಸಕ್ತಿ. ಈ ನೆನಪಿನ ಪುಟಗಳಿಗೆ ಹಲವು ಬಣ್ಣ. ವಿಷಾದ ಮೆತ್ತಿದ ಹಲವು ಪುಟಗಳು, ತಮಾಷೆ ಲೇಪಿಸಿದ ಅನೇಕ ಪುಟಗಳು, ಬದುಕನ್ನು ಅವಡುಗಚ್ಚಿ ದಿಟ್ಟತನದಿಂದ ಎದುರಿಸಿದ ಪುಟಗಳು, ಪ್ರಯೋಗಶೀಲತೆಯ ಪುಟಗಳು, ಹುಡುಕಾಟದ ಸಾಲುಗಳು, ಅಂತರಂಗದ ಪಿಸುಮಾತು, ಲೋಕಾಂತದ ಹೊಸಿಲಿಗೆ ಹಚ್ಚಿದ ಕಿರುದೀಪ-ಎಲ್ಲವನ್ನು ಟಿಎನ್ನೆಸ್‌ ಸಂತನ ನಿರುಮ್ಮಳ ಧಾಟಿಯಲ್ಲಿ ನಮ್ಮ ಮುಂದಿಟ್ಟಿದ್ದಾರೆ. ಟಿಎನ್ನೆಸ್‌ ಅವರ ಐದು ದಶಕಗಳ ಜೀವನ ಚಿತ್ರಗಳಲ್ಲಿ ನೂರಾರು ಜೀವಗಳ ಕತೆಯಿದೆ, ಇಲ್ಲಿ ನಮಗೆ ಬಹುಮುಖಿ ಟಿಎನ್ನೆಸ್‌ ಸಿಗುತ್ತಾರೆ. ಕೃಷಿಕ, ವಕೀಲ, ಉದ್ಯಮಿ, ನಾಟಕಕಾರ, ನಟ, ನಿರ್ದೇಶಕ, ಸಾಹಿತಿಯಾಗಿ ಅವರನ್ನು ಬಲ್ಲವರಿಗೆ ಮಗ, ತಮ್ಮ, ಅಣ್ಣ, ತಂದೆ, ಗಂಡ, ಗೆಳೆಯ ಟಿಎನ್ನೆಸ್‌ ಕೂಡ ಎದುರಾಗುತ್ತಾರೆ. ಇದು ಟಿಎನ್ನೆಸ್‌ ಒಬ್ಬರ ನೆನಪಿನ ಪುಟಗಳಲ್ಲ, ಒಂದು ಕಾಲಾವಧಿಯ ಜ್ಞಾಪಕ ಚಿತ್ರಶಾಲೆ. ಇದನ್ನು ಓದುತ್ತಾ ನಾನು ಬೆರಗಾಗಿದ್ದೇನೆ, ಮೌನವಾಗಿದ್ದೇನೆ. ತಲ್ಲಣಿಸಿದ್ದೇನೆ, ನಕ್ಕು ಹಗುರಾಗಿದ್ದೇನೆ. ವಿಷಾದದಿಂದ ತೊಯ್ದು ಹೋಗಿದ್ದೇನೆ. ತನ್ನ ಕತೆಯನ್ನು ಮತ್ತೊಬ್ಬರ ಅನುಭವ ಆಗಿಸಲಿಕ್ಕೆ ಪ್ರಾಮಾಣಿಕತೆ ಇದ್ದರೆ ಸಾಕು. ಅದು ಈ ಪುಟಗಳಲ್ಲಿ ದಟ್ಟವಾಗಿದೆ. -ಜೋಗಿ
Dispatched within 2 - 3 Business Days

 FREE Home Delivery (For purchase of Rs 499/- and above)

Product Specifications

: 1
: 2023
: Hardbound
: 1/8 Demy Size
: 392
: B-1146049

ಅಗಾಧ ಪ್ರತಿಭೆ, ನಿರಂತರ ಹುಡುಕಾಟ. ಅಚಲ ಶ್ರದ್ಧೆ, ಅವಿರತ ದುಡಿಮೆ, ಉಕ್ಕುವ ಚಿಲುಮೆಯಂಥ ಹುಮ್ಮಸ್ಸಿನ ಟಿ.ಎನ್‌. ಸೀತಾರಾಮ್‌‍, ತಾವು ನಡೆದು ಬಂದ ಹಾದಿಯ ನೆನಪುಗಳನ್ನು ಬರೆಯುತ್ತಾ ಹೋಗಿದ್ದಾರೆ. ಅವರೇ ಕರೆದಿರುವಂತೆ ಇವು ನೆನಪಿನ ಪುಟಗಳು. ಆದರೆ, ಆ ನೆನಪುಗಳು ನಮ್ಮನ್ನು ಕೂಡ ಅವರ ಕಾಲಕ್ಕೆ ಕರೆದೊಯ್ಯುತ್ತದೆ. ಟೈಮ್‌ ಮೆಷೀನಿನಲ್ಲಿ ಹಿಂದಕ್ಕೆ ಹೋಗಿ ಕಾಲಾತೀತರಾಗಿ ಅವರು ಕಂಡದ್ದನ್ನು ನಾವೂ ಕಾಣುತ್ತಾ ಹೋಗುತ್ತೇವೆ. ಹೇಳುವುದಕ್ಕಿಂತ ತೋರಿಸುವುದರಲ್ಲಿ ಸೀತಾರಾಮ್‌ ಅವರಿಗೆ ಆಸಕ್ತಿ. ಈ ನೆನಪಿನ ಪುಟಗಳಿಗೆ ಹಲವು ಬಣ್ಣ. ವಿಷಾದ ಮೆತ್ತಿದ ಹಲವು ಪುಟಗಳು, ತಮಾಷೆ ಲೇಪಿಸಿದ ಅನೇಕ ಪುಟಗಳು, ಬದುಕನ್ನು ಅವಡುಗಚ್ಚಿ ದಿಟ್ಟತನದಿಂದ ಎದುರಿಸಿದ ಪುಟಗಳು, ಪ್ರಯೋಗಶೀಲತೆಯ ಪುಟಗಳು, ಹುಡುಕಾಟದ ಸಾಲುಗಳು, ಅಂತರಂಗದ ಪಿಸುಮಾತು, ಲೋಕಾಂತದ ಹೊಸಿಲಿಗೆ ಹಚ್ಚಿದ ಕಿರುದೀಪ-ಎಲ್ಲವನ್ನು ಟಿಎನ್ನೆಸ್‌ ಸಂತನ ನಿರುಮ್ಮಳ ಧಾಟಿಯಲ್ಲಿ ನಮ್ಮ ಮುಂದಿಟ್ಟಿದ್ದಾರೆ. ಟಿಎನ್ನೆಸ್‌ ಅವರ ಐದು ದಶಕಗಳ ಜೀವನ ಚಿತ್ರಗಳಲ್ಲಿ ನೂರಾರು ಜೀವಗಳ ಕತೆಯಿದೆ, ಇಲ್ಲಿ ನಮಗೆ ಬಹುಮುಖಿ ಟಿಎನ್ನೆಸ್‌ ಸಿಗುತ್ತಾರೆ. ಕೃಷಿಕ, ವಕೀಲ, ಉದ್ಯಮಿ, ನಾಟಕಕಾರ, ನಟ, ನಿರ್ದೇಶಕ, ಸಾಹಿತಿಯಾಗಿ ಅವರನ್ನು ಬಲ್ಲವರಿಗೆ ಮಗ, ತಮ್ಮ, ಅಣ್ಣ, ತಂದೆ, ಗಂಡ, ಗೆಳೆಯ ಟಿಎನ್ನೆಸ್‌ ಕೂಡ ಎದುರಾಗುತ್ತಾರೆ. ಇದು ಟಿಎನ್ನೆಸ್‌ ಒಬ್ಬರ ನೆನಪಿನ ಪುಟಗಳಲ್ಲ, ಒಂದು ಕಾಲಾವಧಿಯ ಜ್ಞಾಪಕ ಚಿತ್ರಶಾಲೆ. ಇದನ್ನು ಓದುತ್ತಾ ನಾನು ಬೆರಗಾಗಿದ್ದೇನೆ, ಮೌನವಾಗಿದ್ದೇನೆ. ತಲ್ಲಣಿಸಿದ್ದೇನೆ, ನಕ್ಕು ಹಗುರಾಗಿದ್ದೇನೆ. ವಿಷಾದದಿಂದ ತೊಯ್ದು ಹೋಗಿದ್ದೇನೆ. ತನ್ನ ಕತೆಯನ್ನು ಮತ್ತೊಬ್ಬರ ಅನುಭವ ಆಗಿಸಲಿಕ್ಕೆ ಪ್ರಾಮಾಣಿಕತೆ ಇದ್ದರೆ ಸಾಕು. ಅದು ಈ ಪುಟಗಳಲ್ಲಿ ದಟ್ಟವಾಗಿದೆ. -ಜೋಗಿ

ಟಿ.ಎನ್.ಸೀತಾರಾಮ್ ರವರು 1948 ಡಿಸೆಂಬರ್ 6 ರಂದು ದೊಡ್ಡಬಳ್ಳಾಪುರ ಹತ್ತಿರ ತಲಗಾವರ ಹಳ್ಳಿಯಲ್ಲಿ ಜನಿಸಿದರು. ತಂದೆ ನಾರಾಯಣರಾವ್ ಮತ್ತು ತಾಯಿ ಸುಂದರಮ್ಮ. ಹೈಸ್ಕೂಲ್ ವರೆಗೆ ದೊಡ್ಡಬಳ್ಳಾಪುರದಲ್ಲಿ ಶಿಕ್ಷಣ ಮುಗಿಸಿ, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪಿಯುಸಿ ನಂತರ ಬಿ.ಎಸ್.ಸಿ ಮುಗಿಸಿ ಲಾ ಪದವಿ ಕೂಡ ಪಡೆದರು. ನಂತರ ನಾಟಕ, ಸಾಹಿತ್ಯದಲ್ಲಿ ಮತ್ತು ರಂಗಭೂಮಿಯಲ್ಲಿ ಇನ್ನಷ್ಟು ತೊಡಗಿಸಿಕೊಂಡರು. ಹಾಗೇ ಕೆಲ ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಆದರೆ ಇವರಿಗೆ ಖ್ಯಾತಿ ತಂದು ಕೊಟ್ಟಿದ್ದು ಕಿರುತೆರೆಯಲ್ಲಿ ಇವರ ಮಾಯಾಮೃಗ, ಮನ್ವಂತರ, ಮುಕ್ತ ಮುಂತಾದ ಧಾರಾವಾಹಿಗಳನ್ನು ಇತಿಹಾಸವನ್ನೇ ಬರೆದಿವೆ. ಬಹುತೇಕ ಧಾರಾವಾಹಿಗಳಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Books from ಸೀತಾರಾಮ್ ಟಿ ಎನ್, Seetharam T N

Author-Image
ಸೀತಾರಾಮ್ ಟಿ ಎನ್, Seetharam T N

About Author

Similar Books